Saturday, April 19, 2025
Google search engine

Homeರಾಜಕೀಯಡಿಸಿಎಂ ಹುದ್ದೆ: ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಡಿಸಿಎಂ ಹುದ್ದೆ: ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಹೇಳಿಕೆ ನೀಡಲು ಆರಂಭಿಸಿದ್ದ ಸಚಿವ ಕೆಎನ್ ರಾಜಣ್ಣ ಜತೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತುಕತೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆಗಳಿಂದ ಸರ್ಕಾರ, ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡಲೇಬಾರದು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಕರ್ನಾಟಕ ಕಾಂಗ್ರೆಸ್​ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಗುದ್ದಾಟ ಜೋರಾದ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ, ಆರಂಭದಲ್ಲಿ ರಾಜಣ್ಣ ಹೆಚ್ಚುರಿ ಡಿಸಿಎಂ ಹುದ್ದೆ ಬಗ್ಗೆ ಮಾತನಾಡಿದ್ದರು. ನಂತರ ಕಾಂಗ್ರೆಸ್ ಶಾಸಕರು, ಸಚಿವರ ಹೇಳಿಕೆ, ಪ್ರತಿ ಹೇಳಿಕೆಗಳು ಮುಂದುವರಿದು ಗೊಂದಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೆಲ ನಾಯಕರು ಹೈಕಮಾಂಡ್ ಭೇಟಿಗಾಗಿ ದೆಹಲಿಗೂ ತೆರಳಿದ್ದರು.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಸಚಿವರ ಹೇಳಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಲಿ, ಬಹಿರಂಗವಾಗಿ ಚರ್ಚಿಸಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಇದೆ, ಅವರು ಏನು ತೀರ್ಮಾನ ಮಾಡುತ್ತಾರೋ ಮಾಡಲಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಬಹಳ ಸಂತೋಷ. ಅದು ಕೂಡ ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದರು.

RELATED ARTICLES
- Advertisment -
Google search engine

Most Popular