Monday, April 7, 2025
Google search engine

Homeರಾಜ್ಯಸುದ್ದಿಜಾಲಗಾಂಜಾ ಮಾರಾಟ:ಇಬ್ಬರು ಆರೋಪಿಗಳ ಬಂಧನ

ಗಾಂಜಾ ಮಾರಾಟ:ಇಬ್ಬರು ಆರೋಪಿಗಳ ಬಂಧನ

ಬಳ್ಳಾರಿ: ನಗರದ ರೂಪನಗುಡಿ ರಸ್ತೆಯ ವಾಲ್ಮೀಕಿ ಬೀದಿಯ ಮನೆಯೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ನಗರದ ಬೀರಪ್ಪ ದೇವಸ್ಥಾನದ ಬಳಿಯ ವಹೀದ್ ಹಾಗೂ ರೂಪನಗುಡಿ ರಸ್ತೆ ಮಾರೆಮ್ಮ ದೇವಸ್ಥಾನದ ಎದುರಿನ ನಿವಾಸಿ ಚಾಂದ್ ಭಾಷೆಯ ಆರೋಪದ ಮೇಲೆ ರೂ. 19,10,000 ಮೌಲ್ಯದ 19 ಕೆಜಿ 100 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಸಂತೋಷ್ ಚೌವ್ಹಾಣ್ ಅವರ ಖಚಿತ ಮಾಹಿತಿಯೊಂದಿಗೆ ಸೈಬರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಮಾಕಾಂತ್ ವಾಯ್ ಡಿಎಸ್‌ಪಿ ಡಾ. ಎಚ್, ಪಿಎಸ್ ಐ ವಲಿ ಭಾಷಾ ಮತ್ತು ಸಿಬ್ಬಂದಿ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ.

ಜಿಲ್ಲೆಯ ಬುಕ್ ಲೈನ್ ನಲ್ಲಿ ಗಾಂಜಾ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನು ಬಂಧಿಸಲಾಗಿದ್ದು, 13 ಪ್ರಕರಣಗಳು ದಾಖಲಾಗಿವೆ. ಈವರೆಗೆ ಒಟ್ಟು 75 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಗಾಂಜಾ ಮತ್ತು ಎನ್‌ಡಿಪಿಎಸ್ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾರೇ ಗಾಂಜಾ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ನಂತರ ಕಾರ್ಯಾಚರಣೆ ನಡೆಸಿದ ತಂಡವನ್ನು ಎಸ್ಪಿ ರಣಜೀರ್ ಕುಮಾರ್ ಬಂಡಾರು ಶ್ಲಾಘಿಸಿದರು. ಈ ವೇಳೆ ಹೆಚ್ಚುವರಿ ಪೊಲೀಸ್ ಹಿರಿಯ ಅಧಿಕಾರಿ ನವೀನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular