Monday, April 21, 2025
Google search engine

Homeರಾಜ್ಯಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಸಿದ್ದರಾಮಯ್ಯನವರಲ್ಲಿ ಚಂದ್ರಶೇಖರಶ್ರೀ ಮನವಿ

ಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಸಿದ್ದರಾಮಯ್ಯನವರಲ್ಲಿ ಚಂದ್ರಶೇಖರಶ್ರೀ ಮನವಿ

ಬೆಂಗಳೂರು: ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯರ ಅವರಲ್ಲಿ ಮನವಿ ಮಾಡಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮಗೆ ಅನುಭವ ಇದೆ, ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್​​ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಶ್ರೀಗಳು ಮನವಿ ಮಾಡಿದರು.

‘ಸಿದ್ದರಾಮಯ್ಯ ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದರು’

ಏತನ್ಮಧ್ಯೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಚಂದ್ರಶೇಖರ ಸ್ವಾಮೀಜಿ, ಡಿಕೆ ಶಿವಕುಮಾರ್​ ಸಿಎಂ ಆಗಬೇಕಾಗಿರುವುದು ಧರ್ಮ. ಅವರು ಹಣ ಖರ್ಚು ಮಾಡಿದ್ದಾರೆ, ಹೋರಾಟ ಮಾಡಿದ್ದಾರೆ. ಸಿದ್ದರಾಮಯ್ಯರು ಸುಮ್ಮನೆ ಇದ್ದು ಅಧಿಕಾರಕ್ಕೆ ಬಂದರು ಎಂದು ಹೇಳಿದರು. ಸಿದ್ದರಾಮಯ್ಯ ಬಿಟ್ಟರೆ ಡಿಕೆ ಶಿವಕುಮಾರ್​​ಗೆ ಸಿಎಂ ಆಗುವ ಅರ್ಹತೆ ಇದೆ ಎಂದೂ ಅವರು ಹೇಳಿದರು.

ಸಿದ್ದರಾಮಯ್ಯ ಹೇಳಿದ್ದೇನು?

ಡಿಕೆ​ ಶಿವಕುಮಾರ್​​ಗೆ ಸಿಎಂ ಸ್ಥಾನ ಕೊಡಬೇಕೆಂಬ ಶ್ರೀಗಳ ಮನವಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಎಲ್ಲವನ್ನೂ ಪಕ್ಷದ ಹೈಕಮಾಂಡ್​ ನಿರ್ಧಾರ ಮಾಡಲಿದೆ. ಹೈಕಮಾಂಡ್​ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.

ಇನ್ನು ಶ್ರೀಗಳ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.

RELATED ARTICLES
- Advertisment -
Google search engine

Most Popular