Sunday, April 20, 2025
Google search engine

HomeUncategorizedರಾಷ್ಟ್ರೀಯಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ಆರು ಮಂದಿಗೆ ಗಾಯ

ಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ಆರು ಮಂದಿಗೆ ಗಾಯ

ನವದೆಹಲಿ: ದೆಹಲಿ ಸುತ್ತಮುತ್ತ ಭಾರಿ ಮಳೆಯಾಗುತಿತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ, ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಸುತ್ತಮುತ್ತಲ ಭಾಗಗಳು ಜಲಾವೃತಗೊಂಡಿವೆ. ಭಾರಿ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿನ ಮೇಲ್ಛಾವಣಿಯ ಭಾಗ ಕುಸಿದು ಆರು ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದೆ, ಘಟನೆಯಲ್ಲಿ ಓರ್ವ ವ್ಯಕ್ತಿ ಕುಸಿದು ಬಿದ್ದ ಕಟ್ಟಡದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು ರಕ್ಷಣಾ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ.

ಮೇಲ್ಛಾವಣಿ ಕುಸಿತ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಟರ್ಮಿನಲ್ 1 ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅಗ್ನಿಶಾಮಕ ಅಧಿಕಾರಿಗಳು ಬೆಳಗಿನ ಜಾವ 5.30ರ ಸುಮಾರಿಗೆ ಮೇಲ್ಛಾವಣಿ ಕುಸಿದಿರುವ ಬಗ್ಗೆ ತಮಗೆ ಕರೆ ಬಂದಿದ್ದು ಕೂಡಲೇ ನಾಲ್ಕು ಅಗ್ನಿಶಾಮಕ ವಾಹನದಲ್ಲಿ ತೆರಳಿ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಇನ್ನೂ ಓರ್ವ ಸಿಲುಕಿರುವ ಮಾಹಿತಿ ಲಭಿಸಿದೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular