ಮಂಡ್ಯ: ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಖಂಡಿಸಿ ಹಾಗೂ ದಲಿತರ 187 ಕೋಟಿ ಹಣವನ್ನ ಕಾಂಗ್ರೆಸ್ ನುಂಗಿದೆ ಎಂದು ಆರೋಪಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ವಾಲ್ಮೀಕಿ ಫೋಟೊ ಹಿಡಿದು ಕುಳಿತ ಬಿಜೆಪಿ ಕಾರ್ಯಕರ್ತರು ಖಾಲಿ ಸೂಟ್ ಕೇಸ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಸಿದ್ದರಾಮಯ್ಯ, ಅಶೋಕ್ ಜಯರಾಂ, ವಿವೇಕ್, ಸಿದ್ದರಾಜು, ಸಿಟಿ ಮಂಜುನಾಥ್ ಭಾಗಿಯಾಗಿದ್ದರು.
ಡಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆಗೆ ಯತ್ನಿಸಿದ್ದು, ಗೇಟ್ ಬಳಿಯೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಕಾರ್ಯಕರ್ತರ ತಡೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.
ಮಂಡ್ಯ ಡಿಸಿ ಕಚೇರಿ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.