Saturday, April 19, 2025
Google search engine

Homeರಾಜ್ಯಸಿಎಂ ಬದಲಾವಣೆ ವಿಚಾರ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿ.ಕೆ. ಶಿವಕುಮಾರ್

ನವದೆಹಲಿ: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಕೇಳಿದಾಗ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮದ್ಯೆ, ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಸಚಿವ ಸ್ಥಾನ ಬಿಡಲು ಸಿದ್ಧ ನನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು. ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ ಎಂದರು.

RELATED ARTICLES
- Advertisment -
Google search engine

Most Popular