ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ: ಬೆಟ್ಟದಪುರ ಯೋಜನಾ ಕಚೇರಿ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಆವರ್ತಿಯ ರಾಜೇಶ್ವರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿರಿಯಾಪಟ್ಟಣ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಲತಾ, ಮಾದಕ ವಸ್ತುಗಳಿಂದ ಮಕ್ಕಳಿಗೆ ಬೀರುವ ದುಷ್ಪರಿಣಾಮಗಳ ಬಗ್ಗೆ ಎಚ್ಚರವಹಿಸುವಂತೆ,ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಪೋಷಕರು ಜಾಗೃತೆ ವಹಿಸಬೇಕು ಎಂದರು .

ಉತ್ತಮ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಯಾವ ರೀತಿಯ ಪಾತ್ರವನ್ನು ನಿರ್ವಹಿಸಿ, ಪೋಷಕರು ಮತ್ತು ಶಿಕ್ಷಕರ ಆಸೆಗಳನ್ನು ಈಡೇರಿಸುವಲ್ಲಿ ಶ್ರಮವಹಿಸಬೇಕು ಎಂದರು. ಪ್ರಾರ್ಥಮಿಕ ಆರೋಗ್ಯ ಕೇಂದ್ರದ CHO ಕಾವ್ಯ ಮಾತನಾಡಿ ಮಾದಕ ವಸ್ತು ವ್ಯಸನದಿಂದ ಮಕ್ಕಳು ಹಾಗೂ ಪೋಷಕರು ದೂರ ಇದ್ದು ಉತ್ತಮ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಶಾಂತಾ, ಆರೋಗ್ಯ ನಿರೀಕ್ಷಕ ಮುಜಿಬ್, ಪ್ರಾಂಶುಪಾಲ ಸುಂದರೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಅಪ್ಪಜಪ್ಪ, ಸಿಬ್ಬಂದಿವರ್ಗ, ಸೇವಾ ಪ್ರತಿನಿಧಿಗಳು , ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.