ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಉಂಟಾದ ಪರಿಣಾಮ, ಕುಸಿದು ಬಿದ್ದು ಸರ್ಕಾರಿ ನೌಕರರೊಬ್ಬ ಸಾವನ್ನಪ್ಪಿರೋ ಘಟನೆ ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಊಟ ಮಾಡುತ್ತಿದ್ದಾಗಲೇ ಯೋಗೇಶ್ ಎಂಬುವರಿಗೆ ಹೃದಯಾಘಾತ ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಂದಹಾಗೇ ಚನ್ನಪಟ್ಟಣ ಮೂಲದ ಯೋಗೇಶ್, ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದನು. ಅವರು ಇಂದು ಊಟ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.