Tuesday, April 22, 2025
Google search engine

Homeರಾಜಕೀಯಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್: ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಹೆಚ್ಚುವರಿ ಡಿಸಿಎಂ ಬಗ್ಗೆ ಮಾತನಾಡಿದ್ರೆ ನೋಟಿಸ್: ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್​ ನೀಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular