ಲೇಹ್: ದೌಲತ್ ಬೇಗ್ ಓಲ್ಡಿ ಪ್ರದೇಶದಲ್ಲಿ ಮಿಲಿಟರಿ ಅಭ್ಯಾಸದ ಸಮಯದಲ್ಲಿ ಐವರು ಯೋಧರು ಹುತಾತ್ಮರಾದ ದುರಂತ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ೧ ಗಂಟೆಗೆ ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದಲ್ಲಿ ಎಲ್‌ಎಸಿಯ ಬಳಿ ನದಿ ದಾಟುವ ಅಭ್ಯಾಸದ ವೇಳೆ ಅವರ ಟ್ಯಾಂಕ್ ಅಪಘಾತಕ್ಕೀಡಾಗಿ ಈ ದುರಂತ ಸಂಭವಿಸಿದೆ. ರಕ್ಷಣಾ ಅಧಿಕಾರಿಗಳು ಒಂದು ಮೃತದೇಹವನ್ನು ಹೊರತೆಗೆದಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ನದಿಯನ್ನು ದಾಟುವಾಗ ನೀರಿನ ಮಟ್ಟವು ಹಠಾತ್ ಏರಿಕೆಯಾದ ಕಾರಣ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಸಮಯದಲ್ಲಿ ಜೆಸಿಒ ಸೇರಿದಂತೆ ಐದು ಸಿಬ್ಬಂದಿ ಟ್ಯಾಂಕ್ ನಲ್ಲಿದ್ದರು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಕೂಡಾ ಸೇರಿದ್ದಾರೆ. ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು ಮತ್ತು ಲೇಹ್‌ನಿಂದ ೧೪೮ ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್ ಬಳಿ ಬೋಧಿ ನದಿಯನ್ನು ತಮ್ಮ ಖಿ-೭೨ ಟ್ಯಾಂಕ್‌ನಲ್ಲಿ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀ ರಿನ ಮಟ್ಟ ಏರಲು ಪ್ರಾರಂಭಿಸಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.