Monday, April 21, 2025
Google search engine

Homeಅಪರಾಧನೀಟ್‌–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ಗುಜರಾತ್‌ ನ ಏಳು ಸ್ಥಳಗಳಲ್ಲಿ ಶೋಧ

ನೀಟ್‌–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ಗುಜರಾತ್‌ ನ ಏಳು ಸ್ಥಳಗಳಲ್ಲಿ ಶೋಧ

ನವದೆಹಲಿ: ನೀಟ್‌–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಬಿಐ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

 ಆನಂದ್, ಖೇಡಾ, ಅಹಮದಾಬಾದ್ ಮತ್ತು ಗೋದ್ರಾ ಜಿಲ್ಲೆಗಳಲ್ಲಿ ಇಂದು  ಬೆಳಿಗ್ಗೆಯಿಂದ ಶೋಧ ಕಾರ್ಯಾಚರಣೆ  ಪ್ರಾರಂಭವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರೀಬಾಗ್‌ನ ಶಾಲೆಯೊಂದರ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌‌

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮೇ 5ರಂದು ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಹಜಾರೀಬಾಗ್‌ ನಗರದ ಸಮನ್ವಯಾಧಿಕಾರಿಯಾಗಿ ಒಯಾಸಿಸ್ ಶಾಲೆಯ ಪಾಂಶುಪಾಲ ಇಹಸಾನುಲ್‌ ಹಕ್‌ ಅವರನ್ನು ನೇಮಿಸಲಾಗಿತ್ತು. ಉಪ ಪ್ರಾಂಶುಪಾಲ ಇಮ್ತಿಯಾಜ್‌ ಆಲಂ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿತ್ತು ಎಂದು ತಿಳಿಸಿದ್ದಾರೆ.

 ಹಕ್‌ ಮತ್ತು ಆಲಂ ಅವರ ವಿಚಾರಣೆ ನಂತರ ಸಿಬಿಐ ಅವರನ್ನು ಬಂಧಿಸಿದೆ. ಅಲ್ಲದೇ ಮತ್ತೆ ಐವರನ್ನು ತನಿಖಾ ಸಂಸ್ಥೆ ವಿಚಾರಣೆ ನಡೆಸುತ್ತಿದೆ. ಪ್ರಕರಣ ಸಂಬಂಧ ಸಿಬಿಐ ಒಟ್ಟು 6 ಎಫ್‌ಐಆರ್‌ಗಳನ್ನು ದಾಖಲಿಸಿದೆ. ಇದರಲ್ಲಿ ಬಿಹಾರ ಹಾಗೂ ಗುಜರಾತ್‌ನ ತಲಾ ಒಂದು ಹಾಗೂ ರಾಜಸ್ಥಾನದ ಮೂರು ಪ್ರಕರಣಗಳು ಸೇರಿವೆ.

ಮೇ 5ರಂದು 14 ವಿದೇಶಿ ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

RELATED ARTICLES
- Advertisment -
Google search engine

Most Popular