Tuesday, April 22, 2025
Google search engine

Homeಅಪರಾಧಕಾನೂನುರಾಜ್ಯ ಚುನಾವಣಾ ಆಯುಕ್ತರಾಗಿ ಜಿ ಎಸ್‌ ಸಂಗ್ರೇಶಿ ನೇಮಕ

ರಾಜ್ಯ ಚುನಾವಣಾ ಆಯುಕ್ತರಾಗಿ ಜಿ ಎಸ್‌ ಸಂಗ್ರೇಶಿ ನೇಮಕ

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ ಎಸ್‌ ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲರು ಶುಕ್ರವಾರ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯಿದೆ (ರಾಜ್ಯ ಚುನಾವಣಾ ಆಯುಕ್ತರ ಸೇವಾ ಷರತ್ತುಗಳು) ನಿಯಮ 2006 ಅನ್ವಯ ಆಯುಕ್ತರ ಅವಧಿಯು ಐದು ವರ್ಷ ಅಥವಾ ಅವರಿಗೆ 65 ವರ್ಷಗಳಾಗುವವರೆಗೆ ಇರಲಿದೆ ಎಂದು ಹೇಳಲಾಗಿದೆ.

ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಸಂಗ್ರೇಶಿ ಅವರನ್ನು ರಾಜ್ಯ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಳೆದ ವರ್ಷ ನೇಮಕ ಮಾಡಲಾಗಿತ್ತು.

RELATED ARTICLES
- Advertisment -
Google search engine

Most Popular