Monday, April 21, 2025
Google search engine

Homeಅಪರಾಧವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ನಿರಾಕರಿಸಿದ ನ್ಯಾಯಾಲಯ

ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶ ನಿರಾಕರಿಸಿದ ನ್ಯಾಯಾಲಯ

ಧಾರವಾಡ : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಶಾಸಕ ವಿನಯ್ ಕುಲಕರ್ಣಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಪ್ರವೇಶಕ್ಕೆ ನಿರಾಕರಿಸಿ ಅರ್ಜಿ ವಜಾ ಮಾಡಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಜಿಲ್ಲೆ ಪ್ರವೇಶ ಪಡೆದು ವೋಟ್ ಮಾಡಿದ್ದರು. ಆದರೆ, ಈಗ ಮತ್ತೆ ಪ್ರವೇಶ ಕೋರಿ ಸಲ್ಲಿಸಿರುವ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.

೨೦೧೬ರ ಜೂನ್‌ನಲ್ಲಿ ನಡೆದ ಜಿಪಂ ಸದಸ್ಯ ಯೋಗೀಶ್‌ಗೌಡ ಗೌಡರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸುಪ್ರೀಂ ಕೋರ್ಟ್ ಧಾರವಾಡ ಪ್ರವೇಶಕ್ಕೆ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ೨೦೨೦ರ ನವೆಂಬರ್‌ನಲ್ಲಿ ವಿನಯ್ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು.

RELATED ARTICLES
- Advertisment -
Google search engine

Most Popular