Sunday, April 20, 2025
Google search engine

Homeಸ್ಥಳೀಯರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಶಾಸಕ ಸಂಸದ ಸಚಿವರ ಅಭಿನಂದನ ಸಮಾರಂಭ ನಡೆಯಲಿದೆ : ಮಂಜು...

ರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಶಾಸಕ ಸಂಸದ ಸಚಿವರ ಅಭಿನಂದನ ಸಮಾರಂಭ ನಡೆಯಲಿದೆ : ಮಂಜು ಎಚ್.ಡಿ


ಚಾಮರಾಜನಗರ
: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಶಾಸಕ,ಸಂಸದ, ಸಚಿವರ ಅಭಿನಂದನಾ ಸಮಾರಂಭವನ್ನು ಜುಲೈ ೫ರಂದು ಬುಧವಾರ ಸಂಜೆ ೫ಗಂಟೆಗೆ ಏರ್ಪಡಿಸಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಜ್ಯಾಧ್ಯಕ್ಷ ಮಂಜು ಎಚ್ ಡಿ ಹೇಳಿದರು.
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಅವರು ಮಾತನಾಡಿ, ವೀರಶೈವ ಲಿಂಗಾಯತ ಸಂಘಟನೆ ವೇದಿಕೆ ಕಳೆದ ೬ ವರ್ಷಗಳಿಂದ ನಮ್ಮ ಜನಾಂಗದ ಸಂಘಟನೆ ಹಾಗೂ ಸಂಘಟನೆ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವುದರೊಂದಿಗೆ ಆಚಾರ ವಿಚಾರಗಳ ಉಳಿಸುವ ಹಲವು ಹೋರಾಟ ನಡೆಸುತ್ತಾ ಬಂದಿದೆ. ಭಾರತೀಯ ಸಂಸ್ಕೃತಿ ನಾಡು ನುಡಿ ರಕ್ಷಣೆಯೊಂದಿಗೆ ನಮ್ಮ ಜನಾಂಗದ ಉನ್ನತಿಯು ಮುಖ್ಯವಾಗಿದೆ.ರಾಜಕೀಯ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ನಮ್ಮ ಸಮುದಾಯದ ಕೊಡುಗೆ ಅಪಾರವಾದದ್ದು,ಈ ಬಾರಿಯ ಚುನಾವಣೆಯಲ್ಲಿ ವಿವಿಧ ಪಕ್ಷಗಳಿಂದ ನಮ್ಮ ಸಮುದಾಯದ ಬಂಧುಗಳು ಜಯಗಳಿಸಿ ಶಾಸಕ ಹಾಗೂ ಸಚಿವರಾಗಿದ್ದಾರೆ.ಪ್ರಸ್ತುತ ಇರುವ ಲೋಕಸಭೆಯಲ್ಲಿ ಹಲವು ಮಂದಿ ಸಂಸದರು, ಕೇಂದ್ರ ಸಚಿವರು ಆಗಿದ್ದಾರೆ ಇವರನ್ನು ಅಭಿನಂದಿಸುವ ಉದ್ದೇಶದಿಂದ ೦೫-೦೭-೨೦೨೩ರ ಬುಧವಾರ ಸಂಜೆ ೫:೦೦ ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಮ್ಮ ಸಂಘದ ವತಿಯಿಂದ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಪ್ರಸನ್ನ ರೇಣುಕಾ, ಡಾ.ವೀರಸೋಮೇಶ್ವರ ರಾಜ ದೇಸಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸುವರು ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು
ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಂಘಟನೆ ವೇದಿಕೆಯ ರಾಜ್ಯ ಸಂಚಾಲಕ ಸೋಮಶೇಖರ್, ಜಿಲ್ಲಾ ಉಪಾದ್ಯಕ್ಷ ಪ್ರಭುಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಶಾಂತಮಲ್ಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಬಸವಣ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಂಜುಂಡಸ್ವಾಮಿ ಇದ್ದರು.

RELATED ARTICLES
- Advertisment -
Google search engine

Most Popular