ಶಿವಮೊಗ್ಗ: ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಜುಲೈ 3 ರಂದು ಬೆಂಗಳೂರಿನಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ತಿಳಿಸಿದ್ದಾರೆ.
ಬಿಜೆಪಿ ಶುಕ್ರವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿತು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಜವಾಬ್ದಾರಿ ಹೊರಬೇಕು. ಅಲ್ಲದೆ ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ಧಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಆಗ್ರಹಿಸಿದ್ದಾರೆ.