ಬೆಂಗಳೂರು : ನಕಲಿ ಇನ್‌ಸ್ಟಾಗ್ರಾಮ್ ಖಾತೆಯಿಂದ ಪವಿತ್ರಾಗೌಡಗೆ ರೇಣುಕಾಸ್ವಾಮಿ ಸುಮಾರು ೨೦೦ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆಂದು ತನಿಖಾಧಿಕಾರಿಗಳ ವಿಚಾರಣೆಯಲ್ಲಿ ಗೊತ್ತಾಗಿರುವುದಾಗಿ ವರದಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಪೊಲೀಸರು, ಮಹತ್ವದ ದಾಖಲೆಗಳು, ಸಾಕ್ಷ್ಯಗಳನ್ನು ಕಲೆ ಹಾಕಿರುವುದಾಗಿ ಮೂಲಗಳು ತಿಳಿಸಿವೆ. ರೇಣುಕಾಸ್ವಾಮಿ ತನ್ನ ನಕಲಿ ಇನ್‌ಸ್ಟಾಗ್ರಾಮ್ ಖಾತೆಯಿಂದ ಪವಿತ್ರಾಗೌಡಗೆ ೨೦೦ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಆಕೆ ಸಂದೇಶಗಳಿಗೆ ಪ್ರತಿಕ್ರಿಯಿಸದಿದ್ದಾಗ, ಅವನು ತನ್ನ ದೇಹದ ಖಾಸಗಿ ಭಾಗದ ಚಿತ್ರವನ್ನು ಕಳುಹಿಸಿದ್ದ ಎಂದು ಮೂಲಗಳು ತಿಳಿಸಿವೆ. ಸದ್ಯ ಪ್ರಕರಣ ಸಂಬಂಧ ತುಮಕೂರು ಜೈಲಿನಲ್ಲಿರುವ ಆರೋಪಿ ನಿಖಿಲ್ ನಾಯಕ್(೨೧) ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿಖಿಲ್ ಪರ ವಕೀಲರು ನಗರದ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.