ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಬೆಳ್ತಂಗಡಿ ಕೊಯ್ಯೂರು ರಸ್ತೆಯ ಉಣ್ಣಾಲು ಸಮೀಪ ಮರ ರಸ್ತೆಗೆ ಉರುಳಿ ಬಿದ್ದಿದೆ. ಮರಬಿದ್ದಾಗ ರಸ್ತೆಯಲ್ಲಿ ಯಾವುದೇ ವಾಹನಗಳು ಇರದಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಕೊಯ್ಯೂರು ರಸ್ತೆಯ ಬದಿಯಲ್ಲಿ ಭಾರೀ ಗಾತ್ರದ ಮರಗಳು ಇದ್ದು, ಹೆಮ್ಮರವೊಂದು ರಸ್ತೆಗೆ ಉರುಳಿ ಸ್ವಲ್ಪದಲ್ಲಿಯೇ ಅಪಾಯ ತಪ್ಪಿತ್ತು. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದರೂ ಅರಣ್ಯ ಇಲಾಖೆ ಇದಕ್ಕೆ ಮುಂದಾಗುತ್ತಿಲ್ಲ ಎಂದು ಜನರು ತಮ್ಮಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು ಅರ್ಥ ಗಂಟೆಗೂ ಹೆಚ್ಚುಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳೀಯರೇ ಸೇರಿ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.