Saturday, April 19, 2025
Google search engine

Homeಅಪರಾಧಸೂರಜ್ ರೇವಣ್ಣ ಮತ್ತೆ ೨ ದಿನ ಪೊಲೀಸ್ ಕಸ್ಟಡಿಗೆ

ಸೂರಜ್ ರೇವಣ್ಣ ಮತ್ತೆ ೨ ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಗೆ ಮತ್ತೆ ೨ ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಇಂದು ಸೋಮವಾರ ಡಾ.ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮತ್ತೆ ೫ ದಿನ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಾ.ಸೂರಜ್ ರೇವಣ್ಣ ಅವರನ್ನು ಮತ್ತೆ ೨ ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular