Saturday, April 19, 2025
Google search engine

Homeರಾಜ್ಯಜುಲೈ 15ರಿಂದ ಜುಲೈ 26ರವರೆಗೆ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಜುಲೈ 15ರಿಂದ ಜುಲೈ 26ರವರೆಗೆ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15ರಿಂದ ಜುಲೈ 26ರವರೆಗೆ ಹತ್ತುದಿನಗಳ ಕಾಲ ಅಧಿವೇಶನ ನಡೆಯಲಿದೆ.

ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕ ಅಂತಿಮಗೊಳಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ. ಇನ್ನು ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಡಳಿತದಲ್ಲಿನ ಲೋಪ ಎತ್ತಿ ಸರ್ಕಾರದ ಮೇಲೆ ಮುಗಿಬೀಳಲು ಸಜ್ಜಾಗಿವೆ. ಅದರಲ್ಲೂ ಮುಖ್ಯವಾಗಿ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಲಿವೆ.

ಈ ಮುಂಗಾರು ಅಧಿವೇಶನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಇಂಧನ, ಹಾಲು ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.

ಮತ್ತೊಂದೆಡೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

RELATED ARTICLES
- Advertisment -
Google search engine

Most Popular