Saturday, April 19, 2025
Google search engine

HomeUncategorizedರಾಷ್ಟ್ರೀಯಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರ ಜಿಲ್ಲೆಯ ಯೋಧ ಸಾವು

ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ವಿಜಯಪುರ ಜಿಲ್ಲೆಯ ಯೋಧ ಸಾವು

ವಿಜಯಪುರ: ಜಿಲ್ಲೆಯ ತಿಕೋಟಾ ಮೂಲದ ಯೋಧ ರಾಜು ಕರ್ಜಗಿ (35) ಮೃತಪಟ್ಟಿದ್ದಾರೆ.

ಭಾರತೀಯ ರೈಫಲ್ಸ್​ನ 51 ಯುನಿಟ್​ ನ ಮಹಾರ್ ರೆಜಿಮೆಂಟ್ 13 ರಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಕರ್ತವ್ಯ ನಿರತ ಯೋಧ ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ಮೃತಪಟ್ಟಿದ್ದಾರೆ. ಯೋಧ ಮೃತಪಟ್ಟಿರುವ ಬಗ್ಗೆ ಸೇನಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಕುಟುಂಬದವರಿಗೆ ಮಾಹಿತಿ ನೀಡಿದೆ.

ಮತ್ತೊಂದೆಡೆ ಯೋಧನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂದು ಅಥವಾ ನಾಳೆ ಯೋಧನ ಪಾರ್ಥೀವ ಶರೀರ ಜಿಲ್ಲೆಯ ಆಗಮಿಸುವ ನಿರೀಕ್ಷೆ ಇದೆ. ಯೋಧನ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.

RELATED ARTICLES
- Advertisment -
Google search engine

Most Popular