ಮಂಡ್ಯ: ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಹಿನ್ನಲೆ ಟ್ರಯಲ್ ಬ್ಲಾಸ್ಟ್ ವಿರುದ್ಧ ರೈತರು, ಪ್ರಗತಿಪರ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಕೆಆರ್ ಎಸ್ ಬಳಿ ರೈತರ ಪ್ರತಿಭಟನೆ ಹಿನ್ನಲೆ ಕೆಆರ್ ಎಸ್ ಗೂ ತೆರಳುವ ಮುನ್ನ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಟ್ರಯಲ್ ಬ್ಲಾಸ್ಟ್ ನಡೆಸಲು ನಿರ್ಧರಿಸಿರುವ ಸರ್ಕಾರ ನಡೆ ಖಂಡಿಸಿ ರಾಜ್ಯ ಸರ್ಕಾರ ಹಾಗೂ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ರಯಲ್ ಬ್ಲಾಸ್ಟ್ ತಜ್ಞರ ತಂಡ ಆಗಮಿಸದಂತೆ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ. ಪ್ರತಿಭಟನೆಯಲ್ಲಿ ಹೋರಾಟಗಾರ ರವೀಂದ್ರ ಸೇರಿದಂತೆ ರೈತ ಮುಖಂಡರು ಭಾಗಿಯಾಗಿದ್ದಾರೆ.