ಮಳವಳ್ಳಿ: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಪಕ್ಷ ಆಯ್ಕೆ ಮಾಡಿಲ್ಲ ಶಾಸಕರ ಅಭಿಪ್ರಾಯದ ಮೇರೆಗೆ ಅವರನ್ನ ಮುಖ್ತಮಂತ್ರಿಗಳನ್ನಾಗಿ ಮಾಡಿದ್ದಾರೆ ಎಂದು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಹೇಳಿದ್ದಾರೆ.
ಮಳವಳ್ಳಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ಈಗಲೂ ನಮ್ಮ ಪಕ್ಷ ಶಾಸಕರ ಬಹುಮತದ ಅಭಿಪ್ರಾಯಕ್ಕೆ ಬದ್ಧವಾಗಿದೆ. ೨೦೧೩ರಲ್ಲೂ ವೋಟಿಂಗ್ ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲಾಯ್ತು. ಇದು ನಮ್ಮ ಪಕ್ಷದ ಇಂಟರ್ನಲ್ ಡೆಮಾಕ್ರಸಿ. ಈಗಲೂ ನಮ್ಮ ಪಕ್ಷ ಇಂಟರ್ನಲ್ ಡೆಮಾಕ್ರಸಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಪಕ್ಷದ ಭವಿಷ್ಯ ದೃಷ್ಟಿಯಿಂದ ಸಮಯ ಸಂದರ್ಭ ನೋಡಿ ಬೇರೆಯವರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಯಾರನ್ನೋ ಓಲೈಕೆಗೆ ಹಾಗೂ ಹೊಗಳಿಕೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾತನಾಡಬಾರದು. ಮೊದಲನೇ ಬಾರಿ ಆಯ್ಕೆಯಾಗಿ ಬಂದ ಶಾಸಕರು ಬಹಳ ಹಾರಾಡುತ್ತಿದ್ದಾರೆ. ಈ ವಿಚಾರವನ್ನ ಬಹಿರಂಗವಾಗಿ ಮಾತನಾಡದೇ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು ಎಂದು ಸಲಹೆ ನೀಡಿದ್ದಾರೆ.