Saturday, April 19, 2025
Google search engine

Homeಅಪರಾಧಡಿಜೆ ಸಾಂಗ್ ​ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ: ಹಲವರಿಗೆ ಗಾಯ

ಡಿಜೆ ಸಾಂಗ್ ​ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ: ಹಲವರಿಗೆ ಗಾಯ

ಕಲಬುರಗಿ: ಡಿಜೆ ಸಾಂಗ್ ​ಗೆ ಡ್ಯಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಯುವಕರ ತಂಡವೊಂದು ಸ್ನೇಹಿತನ ಮದುವೆ ಮೆರವಣಿಗೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡುತ್ತಿತ್ತು. ರಾಮಮಂದಿರ ಕುರಿತ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ಇನ್ನೊಂದು ಕೋಮಿನವರು ಆಕ್ಷೇಪ ತೆಗೆದಿದ್ದಾರೆ. ಸಂಘರ್ಷ ವಿಕೋಪಕ್ಕೆ ಹೋಗಿದ್ದು, ಭೀಮಾಶಂಕರ್ ಎಂಬವರ ಮೇಲೆ ಅನ್ಯಕೋಮಿನ ಯುವಕರ ಗುಂಪು ಹಲ್ಲೆ ನಡೆಸಿದೆ.

ಇದೀಗ, ಘಟನೆ ಬಗ್ಗೆ ಭೀಮಾಶಂಕರ್ ತಾಯಿ ಮಾತನಾಡಿದ್ದು, ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘರ್ಷಣೆ ನಡೆದಿದೆ.

RELATED ARTICLES
- Advertisment -
Google search engine

Most Popular