Saturday, April 19, 2025
Google search engine

Homeಅಪರಾಧಕೋಲಾರ: ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ!

ಕೋಲಾರ: ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ!

ಕೋಲಾರ : ಕಳೆದ ವರ್ಷ ಡಿಸೇಂಬರ್ ಅಲ್ಲಿ ಕಲಬುರ್ಗಿಯಲ್ಲಿ ಹಾಸ್ಟೆಲ್ ಒಂದರಲ್ಲಿ ಅಪ್ರಾಪ್ತ ಬಾಲಕಿ ಒಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣ ನಡೆದಿತ್ತು. ಇದೀಗ ಕೋಲಾರದಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಇದಕ್ಕೆ ಕಾರಣನಾದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.

ಕಳೆದ ವರ್ಷದ ಅಂದರೆ ೨೦೨೩ ಡಿಸೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿರುವ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿತ್ತು. ಬಳಿಕ ನವಜಾತ ಮಗುವಿನೊಂದಿಗೆ ವಿದ್ಯಾರ್ಥಿಯನ್ನು ಕಲಬುರಗಿಯ ಅಮೂಲ್ಯ ಶಿಶು ಗೃಹಕ್ಕೆ ದಾಖಲಿಸಲಾಗಿತ್ತು. ನಂತರ ಪೊಲೀಸರು ಪ್ರರಕಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣವಾದವನು ಅಪ್ರಾಪ್ತೆಯ ಸೋದರ ಸಂಬಂಧಿ ಎನ್ನುವುದು ಗೊತ್ತಾಗಿದೆ. ಬಳಿಕ ಆತನನ್ನು ಪತ್ತೆ ಮಾಡಿ ಪೊಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಿದ್ದರು.

RELATED ARTICLES
- Advertisment -
Google search engine

Most Popular