ಮೈಸೂರು: ಮೈಸೂರು ನಗರ ಸೇರಿದಂತೆ ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅಪರಾಧ ನಿಯಂತ್ರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಶನಿವಾರ ಬೆಳಗ್ಗೆ ಮೈಸೂರಿಗೆ ಆಗಮಿಸಿದ್ದ ಸಚಿವರು, ನಗರದ ಎಸ್ಪಿ ಕಚೇರಿಯಲ್ಲಿ ಮೈಸೂರು ದಕ್ಷಿಣ ವಲಯ ವ್ಯಾಪ್ತಿಯ ಜಿಲ್ಲೆಗಳ ಎಸ್ಪಿಗಳೊಂದಿಗೆ ಮತ್ತು ಐಜಿಪಿ ಡಾ.ಬೋರಲಿಂಗಯ್ಯ ಅವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಮೈಸೂರು ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ನಡೆದ ಅಪರಾಧಗಳ ಅಂಕಿಗಳೊಂದಿಗೆ ಕಾನೂನು ಸುವ್ಯಸ್ಥೆ ಕಾಪಾಡುವುದರೊಂದಿಗೆ ಅಪರಾಧ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಮಾಹಿತಿ ಪಡೆದುಕೊಂಡರು.
ಜತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಸಲಹೆ ಸೂಚನೆಗಳನ್ನು ಗೃಹ ಸಚಿವರು ನೀಡಿದರು. ಸಭೆಯಲ್ಲಿ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ನಾಲ್ಕು ಜಿಲ್ಲೆಗಳ ಎಸ್ಪಿ ಇದ್ದರು.
ಬಳಿಕ ನಗರ ಪೊಲೀಸ್ ಆಯಕ್ತರ ಕಚೇರಿಗೆ ಆಗಮಿಸಿದ ಗೃಹ ಸಚಿವರು, ಕಚೇರಿಯಲ್ಲಿ ಪೊಲೀಸ್ ಆಯುಕ್ತ ಬಿ.ರಮೇಶ್ ಅವರೊಂದಿಗೆ ಎಲ್ಲಾ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ನಗರದಲ್ಲಿ ದಾಖಲಾಗಿರುವ ಅಪರಾಧ ಮತ್ತು ಅಪಘಾತಗಳ ಮಾಹಿತಿಯೊಂದಿಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಸಭೆಯಲ್ಲಿ ಡಿಸಿಪಿಗಳಾದ ಎಂ.ಮುತ್ತುರಾಜು, ಜಾಹ್ನವಿ, ಎ.ಮಾರುತಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಇದ್ದರು.