Saturday, April 19, 2025
Google search engine

Homeರಾಜ್ಯಸುದ್ದಿಜಾಲಜು.5ರಂದು ಮಂಡ್ಯದಲ್ಲಿ ಹೆಚ್‌ಡಿಕೆ ಜನತಾ ದರ್ಶನ

ಜು.5ರಂದು ಮಂಡ್ಯದಲ್ಲಿ ಹೆಚ್‌ಡಿಕೆ ಜನತಾ ದರ್ಶನ

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಜು.5ರಂದು ಮಂಡ್ಯದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.

ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಜನತಾ ದರ್ಶನ ನಡೆಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕುಮಾರಸ್ವಾಮಿ ಅವರು ನಡೆಸಲಿರುವ ಜನತಾ ದರ್ಶನಕ್ಕೆ ಅಗತ್ಯ ಸಿದ್ಧತೆ ಹಾಗೂ ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾಧಿಕಾರಿಗೆ ಸಚಿವರ ಆಪ್ತ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ನಡೆಸಿದ್ದ ಜನತಾ ದರ್ಶನ ಜನಮನ್ನಣೆಗೆ ಪಾತ್ರವಾಗಿತ್ತು. ಮಂಡ್ಯ ಕ್ಷೇತ್ರದಿಂದ ಚುನಾಯಿತರಾದ ನಂತರ ಮೊದಲ ಬಾರಿಗೆ ನಡೆಸುವ ಜನತಾ ದರ್ಶನವಾಗಿದೆ.

ಜನತಾ ದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸಂಬಂಧಿಸಿದ ಮನವಿ ಪತ್ರಗಳನ್ನು ಕುಮಾರಸ್ವಾಮಿ ಅವರು ಸ್ವೀಕರಿಸಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular