ಬೆಂಗಳೂರು : ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆಯಲ್ಲಿ ನೊಂದ ಯುವತಿಯೊಬ್ಬಳು ಕೆಲಸ ಮಾಡುತ್ತಿದ್ದ ಜಿಮ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಾಗಲಗುಂಟೆ ಬಳಿಯ ಗೊಲ್ಡ್ ಜಿಮ್ ನಲ್ಲಿ ರಿಸೆಪ್ಶೆನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು, ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಪೋಷಕರು ನಿರಾಕರಿಸಿದ ಹಿನ್ನೆಲೆಯಲ್ಲಿ ಜಿಮ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.