ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಈಗ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್‌ಡಿ ರೇವಣ್ಣ ಆಗಮಿಸಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಣ್ಣ, ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೆ ಕೊಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದಿದ್ದರು. ಆದರೆ ಇಂದು ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಭೇಟಿ ಮಾಡಿದ್ದಾರೆ.