ದಾವಣಗೆರೆ: ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಎಲ್ಲಾ ಹಂತದಲ್ಲಿ ಪೋಷಕರು ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ಅವರು ಬುಧುವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಾನುವಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ, ಎಂ.ಟಿ.ಪಿ ಕಾಯ್ದೆ, ಪಿ.ಎನ್.ಡಿ.ಪಿ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೋಕ್ಸೋ ಕಾಯ್ದೆ 2012 ನ್ನು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿದೆ. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ಮಕ್ಕಳನ್ನು ಮಗು ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
16 ರಿಂದ 18 ವರ್ಷ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಕನಿಷ್ಠ 10 ವರ್ಷಗಳ ಸೆರೆವಾಸ, ಜೀವಾವಧಿ ಶಿಕ್ಷೆ ಮತ್ತು ದಂಡ ವಿಸ್ತರಿಸಬಹುದು. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಕನಿಷ್ಠ 20 ವರ್ಷಗಳ ಸೆರೆವಾಸ, ಜೀವನದ ಉಳಿದ ಅವಧಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆಯುವುದಿಲ್ಲ. ದುಷ್ಕøತ್ಯಕ್ಕೆ ನೇರವಾಗಿ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದವರಿಗೂ ಈ ಕಾಯ್ದೆಯಡಿ ಶಿಕ್ಷೆ ಇದೆ ಎಂದು ಹೇಳಿದರು.
ಹಲವಾರು ಎನ್‍ಒಜಿಗಳು ಅಭ್ಯಾಸ ಮಾಡಿದ ಪ್ರಕಾರ ಕೇವಲ 35 ಪ್ರತಿಶತ ಮಕ್ಕಳಿಗೆ ಹಾಗೂ 32 ಪ್ರತಿಶತ ಪೆÇೀಷಕರಿಗೆ ಪೋಕ್ಸೋ ಕಾಯ್ದೆ ಬಗ್ಗೆ ಅರಿವಿದೆ ಎಂದು ತಿಳಿದು ಬಂದಿರುತ್ತದೆ. 18 ವರ್ಷದ ಒಳಗಿನ ಬಾಲಕ ಬಾಲಕಿಯರು ಎಲ್ಲರೂ ಮಕ್ಕಳೇ ಇವರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಇವುಗಳನ್ನು ತಡೆಗಟ್ಟುವುದು ಈ ಕಾಯ್ದೆ ಮುಖ್ಯ ಉದ್ದೇಶವಾಗಿದೆ. ಪರಿಚಿತರು ಮತ್ತು ಅಪರಿಚಿತರಿಂದ ಆಗುತ್ತಿರುವಂತಹ ದೌರ್ಜನ್ಯ, ಮಾನಸಿಕ ದೌರ್ಜನ್ಯ ಇವುಗಳನ್ನು ತಡೆಗಟ್ಟಿದರೆ ಮಕ್ಕಳ ಮಾನಸಿಕ, ಭೌತಿಕ ವಿಕಾಸ ಮತ್ತು ಶೈಕ್ಷಣಿಕವಾಗಿ ಮುಂದುವರೆಯುವುದಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆರ್.ಎಲ್. ಕಾನೂನು ಕಾಲೇಜು ವಿಶ್ರಾಂತ ಪ್ರಾಂಶುಪಾಲ ಡಾ.ಎಂ ಸೋಮಶೇಖರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ ಟಿ.ಎನ್, ಹರಿಹರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ರಾಮಕೃಷ್ಣ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೂರ್ಣಿಮ.ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಆರಕ್ಷಕ ವೃತ್ತ ನಿರೀಕ್ಷಕರಾದ ಸುರೇಶ ಸಗರಿ, ಹಿರಿಯ ವೈದ್ಯಾಧಿಕಾರಿಯಾದ ಡಾ.ಪ್ರಶಾಂತ್, ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.