ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ನೆಡುವ ವನ ಮಹೋತ್ಸವ ಕಾರ್ಯಕ್ರಮಕ್ಕೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಚಾಲನೆ ನೀಡಿದರು.
ತಾಲೂಕಿನ ಬದನಗುಪ್ಪೆ ಬಳಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಗಿಡ ನೆಡುವ ಮೂಲಕ ಉಸ್ತುವಾರಿ ಸಚಿವರು ವನ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ವನ ಮಹೋತ್ಸದ ಅಂಗವಾಗಿ ೬ ಲಕ್ಷ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪೂವಿತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ದೀಪಾ ಕಂಟ್ರಾಕ್ಟರ್ ಸೇರಿದಂತೆ ಇತರರಿದ್ದರು.