Tuesday, April 15, 2025
Google search engine

HomeUncategorizedರಾಷ್ಟ್ರೀಯನೀಟ್‌-ಪಿಜಿ ಪರೀಕ್ಷೆಗೆ ದಿನಾಂಕ ನಿಗದಿ

ನೀಟ್‌-ಪಿಜಿ ಪರೀಕ್ಷೆಗೆ ದಿನಾಂಕ ನಿಗದಿ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ ವಿವಾದದ ಕಾರಣ ಮುಂದೂಡಲ್ಪಟ್ಟಿದ್ದ ನೀಟ್‌-ಪಿಜಿ ಪರೀಕ್ಷೆಗೆ ಕೊನೆಗೂ ದಿನಾಂಕ ನಿಗದಿಪಡಿಸಲಾಗಿದೆ.

ಮುಂದಿನ ತಿಂಗಳು ಆಗಸ್ಟ್‌ 11 ರಂದು ಪರೀಕ್ಷೆ ನಡೆಯಲಿದೆ. ಎರಡು ಹಂತದಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಈ ಮೊದಲು ಜೂ.23 ರಂದು ಪರೀಕ್ಷೆ ನಡೆಯಬೇಕಿತ್ತು. ಅಕ್ರಮದ ಮುನ್ಸೂಚನೆ ಸಿಕ್ಕ ಹಿನ್ನೆಲೆ ಮುಂದೂಡಲಾಗಿತ್ತು.

ನ್ಯಾಷನಲ್‌ ಬೋರ್ಡ್‌ ಆಫ್‌ ಎಕ್ಸಾಮಿನೇಷನ್ಸ್‌ ಶುಕ್ರವಾರ ಹೊಸ ದಿನಾಂಕವನ್ನು ಪ್ರಕಟಿಸಿದೆ.

ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ಎಂಬಿಬಿಎಸ್ ಪದವಿ ಹೊಂದಿರುವವರ ಅರ್ಹತೆಯನ್ನು ನಿರ್ಣಯಿಸಲು ನೀಟ್‌-ಪಿಜಿ ಅನ್ನು ನಡೆಸಲಾಗುತ್ತದೆ.

RELATED ARTICLES
- Advertisment -
Google search engine

Most Popular