Sunday, April 20, 2025
Google search engine

Homeರಾಜಕೀಯಸಿದ್ದರಾಮಯ್ಯ ಅವರೇ, ಹೈಕೋರ್ಟ್ ಹಾಕಿರುವ ಛೀಮಾರಿ ತಮ್ಮ ಗಮನಕ್ಕೆ ಬಂದಿದೆಯೇ?: ಆರ್‌.ಅಶೋಕ್

ಸಿದ್ದರಾಮಯ್ಯ ಅವರೇ, ಹೈಕೋರ್ಟ್ ಹಾಕಿರುವ ಛೀಮಾರಿ ತಮ್ಮ ಗಮನಕ್ಕೆ ಬಂದಿದೆಯೇ?: ಆರ್‌.ಅಶೋಕ್

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್‌ ಗಳಿಗೆ ಮಾರಾಟ ಮಾಡುವ ಮಾಫಿಯಾ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿರುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ಪ್ರತಿಕ್ರಿಯಿಸಿದ್ದಾರೆ.

‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ಅನ್ಯಭಾಗ್ಯ ಅಲ್ಲ, ಕನ್ನಭಾಗ್ಯ. ಹತ್ತು ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕನ್ನಡಿಗರಿಗೆ ಹಸಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆ.ಜಿ ಅಕ್ಕಿಯನ್ನೂ ಕಳ್ಳಸಾಗಣೆ ಮಾಡುವ ಮೂಲಕ ಬಡವರ ಹೊಟ್ಟೆಗೆ ಹೊಡೆಯುತ್ತಿದೆ ಎಂದು ಟೀಕಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಹೈಕೋರ್ಟ್ ನಿಮ್ಮ ಸರ್ಕಾರಕ್ಕೆ ಹಾಕಿರುವ ಛೀಮಾರಿ ತಮ್ಮ ಗಮನಕ್ಕೆ ಬಂದಿದೆಯೇ?, ಅಕ್ಕಿಯ ಕಳ್ಳಸಾಗಣೆ ಮಾಡುವ ಡಾನ್‌ಗಳನ್ನು ಸರ್ಕಾರವೇ ರಕ್ಷಿಸುತ್ತಿದೆ ಎಂದು ಹೈಕೋರ್ಟ್ ಹೇಳಿದೆ. ನಿಮಗೆ ಕಿಂಚಿತ್ತಾದರೂ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಹೈಕೋರ್ಟ್‌ ಹೇಳಿದ್ದೇನು?

ಬಡವರಿಗಾಗಿ ರೂಪಿಸಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್‌ಗಳಿಗೆ ಮಾರಾಟ ಮಾಡುವ ಮಾಫಿಯಾ ವಿರುದ್ಧ ಆಯಾ ಜಿಲ್ಲಾಧಿಕಾರಿಗಳು ಹೆಚ್ಚಿನ ನಿಗಾ ವಹಿಸುವ ಮೂಲಕ ಅಯೋಗ್ಯರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೈಕೋರ್ಟ್‌ ಕಿಡಿಕಾರಿದೆ.

ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ‘ಅಕ್ಕಿ ಕಳ್ಳಸಾಗಣೆ ಮಾಡುವ ಡಾನ್‌ಗಳನ್ನು ರಾಜಕಾರಣಿಗಳು ರಕ್ಷಿಸಲು ಮುಂದಾಗಿ ಅವರ ಬೆನ್ನಿಗೆ ನಿಲ್ಲುತ್ತಾರೆ’ ಎಂದು ಆಕ್ರೋಶ ಹೊರಹಾಕಿತು.

‘ಕಳ್ಳಸಾಗಣೆದಾರರು ಸರಕು ಪಟ್ಟಿ, ಸಿ ಫಾರಂ ಮತ್ತು ರಸೀದಿಯಂಥ ಅಗತ್ಯ ದಾಖಲೆಗಳಿಲ್ಲದೆ ಅಕ್ಕಿಯನ್ನು ಟ್ರಕ್‌ಗಳಲ್ಲಿ ಒಂದೆಡೆ.ಯಿಂದ ಮತ್ತೊಂದೆಡೆಗೆ ಸಾಗಿಸುತ್ತಾರೆ. ಇಂತಹವರನ್ನು ಪತ್ತೆ ಹಚ್ಚಿದಾಗ ಅವರ ವಿರುದ್ಧ ತಕ್ಕ ಕ್ರಮ ಕೈಗೊಳ್ಳುವ ಅಧಿಕಾರ ಸ್ಥಳೀಯ ಜಿಲ್ಲಾಧಿಕಾರಿಗೆ ಇರುತ್ತದೆ. ಆದರೆ, ಅವರನ್ನು ಬಚಾವು ಮಾಡುವಂತಹ ವ್ಯವಸ್ಥೆ ಇದೆಯಲ್ಲಾ’ ಎಂದು ನ್ಯಾಯಪೀಠ ವಿಷಾದ ವ್ಯಕ್ತಪಡಿಸಿತು.

ಕಾನೂನನ್ನು ಎಷ್ಟೇ ಬಿಗಿಗೊಳಿಸಿದರೂ ಇಂದು ಕಳ್ಳಸಾಗಣೆ ದಾರರು, ‘ನಿನ್ನ ಮೊಣಕೈಗೆ ಹತ್ತಿರುವ ಜೇನುತುಪ್ಪವನ್ನು ನಾನು ನೆಕ್ಕುತ್ತೇನೆ. ನನ್ನ ಮೊಣಕೈಗೆ ಮೆತ್ತಿರುವ ಜೇನು ತುಪ್ಪವನ್ನು ನೀನು ನೆಕ್ಕು ಎಂಬಂತಹ ಮಟ್ಟಕ್ಕೆ ಇಳಿದಿದ್ದಾರೆ. ಅನ್ನಭಾಗ್ಯದಲ್ಲಿ ನನ್ನ–ನಿಮ್ಮ ದುಡ್ಡು ಅಡಗಿರುತ್ತದೆ. ಸರ್ಕಾರ ಅದಕ್ಕೆ ಸಹಾಯಧನ ನೀಡುವ ಮೂಲಕ ಬಡವರ ಉದ್ಧಾರಕ್ಕೆ ಎಂದು ಯೋಜನೆ ಜಾರಿಗೊಳಿಸಿರುತ್ತದೆ. ಇದನ್ನು ನಾವ್ಯಾರೂ ಮರೆಯಬಾರದು’ ಎಂದು ಹೇಳಿತು.

ಯಾರೊ ಕೆಲವು ಅದೃಷ್ಟವಂತರು ತಮ್ಮ ತಂದೆ–ತಾತ ಮಾಡಿದ ಪುಣ್ಯದಿಂದ ಇವತ್ತು ಸಮಾಜದಲ್ಲಿ ಉತ್ತಮ ಸ್ಥಾನಮಾನ ಅನುಭವಿಸುತ್ತಿ ದ್ದಾರೆ. ಆದರೆ, ಬಡವರಿಗೆ ಅಂತಹ ಭಾಗ್ಯ ಇರುವುದಿಲ್ಲ. ಬಡವರ ಪಾಲಿನ ಕಲ್ಯಾಣ ಕಾರ್ಯಕ್ರಮದ ಅಕ್ಕಿ ಕಾಳಸಂತೆಯಲ್ಲಿ ಹೋಟೆಲ್‌ಗಳಿಗೆ ಹೋಗುವುದನ್ನು ನಾವೆಲ್ಲರೂ ನೋಡುತ್ತಾ ಕುಳಿತರೆ ಹೇಗೆ? ಸಾರ್ವಜನಿಕ ವಿತರಣಾ ಯೋಜನೆ ಅಡಿಯಲ್ಲಿನ ಅನ್ನಭಾಗ್ಯದಂಥ ಜನಪರ ಯೋಜನೆ ನಿಜವಾದ ಬಡವರಿಗೆ ತಲುಪಬೇಕು ಎಂದು ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

RELATED ARTICLES
- Advertisment -
Google search engine

Most Popular