ಚಾಮರಾಜನಗರ: ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ, ಭವಿಷ್ಯವನ್ನು ರೂಪಿಸುವ ಮಾನವೀಚಿi ಮೌಲ್ಯ ಗುಣಗಳನ್ನು ರೂಡಿಸಿಕೊಳ್ಳಬೇಕೆಂದು ಸಮಾಜ ಸೇವಕ ವಡಗೆರೆ ಕುಮಾರ್ ಕರೆ ನೀಡಿದ್ದಾರೆ.
ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಾಗ್ರಿ ಹಾಗೂ ತಮ್ಮ ತೋಟದಲ್ಲಿ ಬೆಳೆದ ಬದನೆಕಾಯಿಯನ್ನು ಶಾಲೆಯ ಅಕ್ಷರ ಜೋಳಿಗೆಗೆ ನೀಡುವುದರ ಜೊತೆಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ದಿನಗಳಲ್ಲಿ ಮಾನವೀಯ ಮೌಲ್ಯಗಳು ಸಮಾಜದಲ್ಲಿ ಕುಸಿಯುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಕರು ಪಾಠ ಪ್ರವಚನಗಳನ್ನು ಮಾಡುವುದರ ಜೊತೆಗೆ ಮೌಲ್ಯಾಧಾರಿತ ಶಿಕ್ಷಣವನ್ನು ಭೋದಿಸಬೇಕೆಂದು ಮನವಿ ಮಾಡಿದ ಅವರು, ಈ ನಿಟ್ಟಿನಲ್ಲಿ ಮಕ್ಕಳು ಕೂಡ ಮಾನವೀಯ ಮೌಲ್ಯಗಳಾದ ನಾಯಕತ್ವ, ಶಿಸ್ತು, ಸಂಯಮ, ಸಹನೆ, ಶಾಂತಿ, ಅನುಕಂಪ, ಔದಾರ್ಯತೆ, ಸಹಾಯ, ಸಹಬಾಳ್ವೆ, ಸೌಹಾರ್ಧತೆ ಗುಣಗಳನ್ನು ಬೆಳೆಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಿಕ್ಷಣ ಸಂಯೋಜಕರಾದ ಬಸವಣ್ಣ ಮಾತನಾಡಿ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಮೌಲ್ಯಧಾರಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಇಲ್ಲಿನ ಶಿಕ್ಷರು ಸರ್ಕಾರದ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಕಾಲಕಾಲಕ್ಕೆ ಅನುಗುಣವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಮರ್ಪಕ ಭಾವನೆಯಿಚಿದ ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯವೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇಶ್ವರಸ್ವಾಮಿ ಮಾತನಾಡಿ ಮಕ್ಕಳನ್ನು ದೇಶದ ಸತ್ಪ್ರೆಜೆಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸದುಪಯೋಗಪಡಿಸಿಕೊಂಡು, ಮಾದರಿ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಹಾಜರಿದ್ದರು.