Saturday, April 19, 2025
Google search engine

Homeರಾಜ್ಯಸುದ್ದಿಜಾಲಡಾ. ಬಾಬುಜಗಜೀವನರಾಂ ಎಲ್ಲಾ ಶೋಷಿತ ಸಮಾಜಗಳ ಅಭಿವೃದ್ಧಿಗೆ ಹೋರಾಡಿದ ಆದರ್ಶ ಪುರುಷ-ಶಾಸಕ ಡಿ.ರವಿಶಂಕರ್

ಡಾ. ಬಾಬುಜಗಜೀವನರಾಂ ಎಲ್ಲಾ ಶೋಷಿತ ಸಮಾಜಗಳ ಅಭಿವೃದ್ಧಿಗೆ ಹೋರಾಡಿದ ಆದರ್ಶ ಪುರುಷ-ಶಾಸಕ ಡಿ.ರವಿಶಂಕರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಂ ಅವರುಗಳ ನೂತನ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ವಿಧಾನಸಭೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಂ ಅವರುಗಳ ನೂತನ ಕಂಚಿನ ಪ್ರತಿಮೆಗಳನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಪುರಸಭೆ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಪುರಸಭೆ ಮತ್ತು ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬುಜಗಜೀವನರಾಂ ಅವರ ೩೮ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹರಿಕಾರನ ಪ್ರತಿಮೆಗೆ ಮಾಲಾರ್ಪಣೆ ಮಾತನಾಡಿದರು.

ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಅನುದಾನ ನೀಡಿ ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ಡಾ. ಬಾಬುಜಗಜೀವನರಾಂ ಸಮುದಾಯ ಭವನಕ್ಕೆ ಈಗ ಹೆಚ್ಚುವರಿಯಾಗಿ ೯೨ ಲಕ್ಷ ಅನುದಾನ ಮಂಜೂರು ಮಾಡಿಸಿದ್ದು ಕಾಮಗಾರಿ ಪ್ರಗತಿಯಲ್ಲಿದ್ದು ಇನ್ನುಳಿದ ಕಾಮಗಾರಿಗೆ ಅಗತ್ಯ ಅನುದಾನ ಕೊಡಿಸಿ ಭವನ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು.

ಡಾ. ಬಾಬುಜಗಜೀವನರಾಂ ಅವರು ಸಮಾಜದ ಬಗ್ಗೆ ಕಳಕಳಿಯಿಟ್ಟುಕೊಂಡು ದಲಿತರಿಗಾಗಿ ಮಾತ್ರವಲ್ಲದೆ ಇತರ ಎಲ್ಲಾ ಶೋಷಿತ ಸಮಾಜಗಳ ಅಭಿವೃದ್ಧಿಗೆ ಹೋರಾಡಿದ ಆದರ್ಶ ಪುರುಷರಾಗಿದ್ದು ಅಂತಹ ಮಹನೀಯರ ಜಯಂತಿಗಳನ್ನು ಆಚರಣೆಗೆ ಸೀಮಿತಗೊಳಿಸದೆ ಅವರ ತತ್ವ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದರೆ ಜಯಂತಿ ಆಚರಣೆಗೆ ಅರ್ಥ ಬರಲಿದೆ ಎಂದರು.

ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಭಾರತ ದೇಶದ ಆಹಾರದ ಕೊರತೆಯನ್ನು ನೀಗಿಸಿ ಹಸಿರು ಕ್ರಾಂತಿಯ ಹರಿಕಾರರೆಂಬ ಬಿರುದು ಪಡೆಯುವುದರ ಜತೆಗೆ ಕಾರ್ಖಾನೆಗಳ ಕಾರ್ಮಿಕರ ದುಡಿಮೆಯ ಅವಧಿಯನ್ನು ಎಂಟು ಗಂಟೆಗಳಿಗೆ ನಿಗದಿಗೊಳಿಸಿದ ಮಹಾನಾಯಕನನ್ನು ದೇಶ ನಿರಂತರವಾಗಿ ಸ್ಮರಿಸಬೇಕೆಂದರು.

ಸಮಾಜದ ಮುಖಂಡರು ಒಂದೆoಡೆ ಕುಳಿತು ಚರ್ಚಿಸಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಪಟ್ಟಿಯನ್ನು ನೀಡಿದರೆ ಅವುಗಳಿಗೆ ಅಗತ್ಯವಾದ ಅನುದಾನವನ್ನು ಮಂಜೂರು ಮಾಡಿಸಿ ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದ ಶಾಸಕರು ಮುಂಬರುವ ದಿನಗಳಲ್ಲಿ ಸರ್ಕಾರದ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ತಾಲೂಕು ಆದಿಜಾಂಬವ ಸಂಘದ ಅಧ್ಯಕ್ಷ ಎಂ.ಲೋಕೇಶ್ ಪ್ರಧಾನ ಭಾಷಣ ಮಾಡಿದರು. ಮಾದಿಗ ದಂಡೋರ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಪುರಸಭೆ ಸದಸ್ಯರಾದ ಸರೋಜಮಾದಯ್ಯ, ಸಿ.ಶಂಕರ್, ಕೋಳಿಪ್ರಕಾಶ್, ನಟರಾಜು, ಸೌಮ್ಯಲೋಕೇಶ್, ಮಾಜಿ ಅಧ್ಯಕ್ಷ ಡಿ.ಕಾಂತರಾಜು, ಮಾಜಿ ಸದಸ್ಯ ಕೆ.ವಿನಯ್, ತಾ.ಪಂ. ಮಾಜಿ ಅಧ್ಯಕ್ಷ ಎಂ.ಹೆಚ್.ಸ್ವಾಮಿ, ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಮಾಜಿ ನಿರ್ದೇಶಕ ಡಿ.ಕಾಳಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ವಕ್ತಾರ ಸೈಯದ್‌ಜಾಬೀರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ತಾ.ಪಂ. ಜಿ.ಕೆ.ಹರೀಶ್, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್.ಎಂ.ಅಶೋಕ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ, ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular