ಗಾಂಧಿನಗರ: ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ. ಬಹುತೇಕ ಅವಶೇಷಗಳ ಅಡಿ ಇನ್ಯಾರು ಸಿಲುಕಿಲ್ಲ ಎಂದು ಬಾವಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಕಟ್ಟಡದ ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8 ವರ್ಷಗಳ ಹಿಂದಷ್ಟೇ ನಿರ್ಮಾಣವಾಗಿದ್ದ ಈ ಕಟ್ಟಡ ಬಹುತೇಕ ಶಿಥಿಲಾವಸ್ಥೆಯಲ್ಲಿತ್ತು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.