ಬೆಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಾಲಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪಶ್ಚಿಮ ಬಂಗಾಳ ಮೂಲದ ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ದಿಯಾ ಮಂಡೋಲ್ ಪಶ್ಚಿಮ ಬಂಗಾಳ ಮೂಲದವಳಾಗಿದ್ದು, ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಮೂರು ದಿನಗಳ ಹಿಂದೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.