ಇಂಫಾಲ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ.
ರಾಹುಲ್ ಗಾಂಧಿ ಇಂದು ಸೋಮವಾರ ಅಸ್ಸಾಂನ ನಿರಾಶ್ರಿತರ ಶಿಬಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು. ಬಳಿಕ ರಸ್ತೆ ಮೂಲಕ ಮಣಿಪುರದ ಜಿರಿಬಾಮ್ಗೆ ತೆರಳಿದ್ದಾರೆ. ರಾಹುಲ್ ಗಾಂಧಿ ಅವರು ಜಿರಿಬಾಮ್ ನಲ್ಲಿ ಸಂತ್ರಸ್ತರೊಂದಿಗೆ ಸಂವಾದ ನಡೆಸುವ ಮೂಲಕ ಕಷ್ಟದ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.