ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಭಾನುವಾರ ವಚನ ಸಾಹಿತ್ಯ ಪಿತಾಮಹ ಡಾ. ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುದಾಯದ ಆವರಣದ ಸುವರ್ಣ ಕಿರಣದಲ್ಲಿ ಫ.ಗು.ಹಳಕಟ್ಟಿಯವರ ಜನ್ಮ ದಿನಾಚರಣೆಯನ್ನು ನಗರದ ಡಾ. ಗಣ್ಯರಿಂದ ವಚನ ಮತ್ತು ಸಾಹಿತ್ಯದ ಪಿತಾಮಹ ಡಾ. ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ವಚನ ಸಾಹಿತ್ಯದಲ್ಲಿ ಜಗತ್ತಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಹಾಗೂ ಡಾ. ಬಾಬು ಜಗಜೀವನರಾಮ್ ರಾಜ್ಯ ಪ್ರಶಸ್ತಿ ಎಂ.ಡಿ.ವೆಂಕಮ್ಮ, ಜಾನಪದ ಅಕಾಡೆಮಿ ಅಧ್ಯಕ್ಷ ಟಿ.ಎಚ್.ಎಂ.ಬಸವರಾಜ್, ಕನ್ನಡ ಉಪನ್ಯಾಸಕ ಶಿವಾನಂದ ಹೊಂಬಾಳ್ಕರ್, ಚಿತ್ರ ಕಲಾವಿದ ಮಂಜುನಾಥ ಗೋವಿಂದವಾಡ, ಖ್ಯಾತ ಹಿಂದೂಸ್ತಾನಿ ಗಾಯಕ ವಿ.ಎಂ.ವೀರಭದ್ರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶಬಾಬು ಸೇರಿದಂತೆ ಇತರರಿದ್ದರು.