Saturday, April 19, 2025
Google search engine

Homeಸ್ಥಳೀಯತ್ರಿಯಂಬಕಪುರ: ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಭೂಮಿ ಪೂಜೆ

ತ್ರಿಯಂಬಕಪುರ: ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕ ಭೂಮಿ ಪೂಜೆ

ಗುಂಡ್ಲುಪೇಟೆ: ತಾಲೂಕಿನ ತ್ರಿಯಂಬಕಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 13.90 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಶಾಲಾ ಕೊಠಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೂಮಿ ಪೂಜೆ ನೇರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್.ಎಂ.ಗಣೇಶಪ್ರಸಾದ್, ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ವಾರ್ಷಿಕ ಕೋಟ್ಯಾಂತರ ರೂ. ಹಣ ವ್ಯಯಮಾಡುತ್ತಿದೆ. ಅಲ್ಲದೇ ಸುಸಜ್ಜಿತ ಶಾಲಾ ಕೊಠಡಿ, ಉಚಿತ ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದನ್ನು ಮನಗಂಡು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲಾ ಶಿಕ್ಷಕರು ಕೂಡ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಸ್ವಚ್ಛತೆ ಕಡೆ ಗಮನ ಹರಿಸಬೇಕು. ಶಾಲಾ ಸುತ್ತಲು ಗಿಡ ನೆಡುವ ಮೂಲಕ ಅದನ್ನು ಪೆÇೀಷಿಸಿ ಸಂರಕ್ಷಣೆ ಮಾಡಬೇಕು. ಇದರಿಂದ ಉತ್ತಮ ಪರಿಸರ ಪಡೆಯಲು ಸಾಧ್ಯ. ಪೆÇೀಷಕರು ಮಕ್ಕಳಿಗೆ ಹಣಕಾಸು, ಆಸ್ತಿ ಬದಲು ಗುಣಮಟ್ಟದ ಶಿಕ್ಷಣವನ್ನು ಕಡಾಯವಾಗಿ ಕೊಡಿಸಿ ಎಂದು ತಿಳಿಸಿದರು.

ಪ್ರಸ್ತುತ ಶಿಕ್ಷಣಕ್ಕೆ ಹೆಚ್ಚಿನ ಪ್ರಾಧ್ಯಾನ್ಯತೆಯಿದ್ದು, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಬೇಡಿಕೆ ಹೆಚ್ಚಿದೆ. ಶಾಲಾ-ಕಲೇಜು ವಿದ್ಯಾರ್ಥಿಗಳು  ಇತ್ತ ಅಸಕ್ತಿ ತೋರುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಸಲಹೆ ನೀಡಿದರು.

ಗುಣಮಟ್ಟದಿಂದ ಶೀಘ್ರ ಕಾಮಗಾರಿ ಮುಗಿಸಿ: 13.90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಾಲಾ ಕೊಠಡಿ ಕಾಮಗಾರಿಯನ್ನು 6 ತಿಂಗಳೋಳಗೆ ಗುಣಮಟ್ಟದಿಂದ ಮುಗಿಸಬೇಕು. ಕಳಪೆ ಕಂಡುಬಂದರೆ ಸಹಿಸುವುದಿಲ್ಲ ಎಂದು ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.

ಶಾಲಾ ಮಕ್ಕಳಿಗೆ ಪಠ್ಯ-ಪುಸ್ತಕ ವಿತರಣೆ: ಈ ಸಂದರ್ಭದಲ್ಲಿ ಶಾಸಕ ಎಚ್.ಎಂ.ಗಣೇಶಪ್ರಸಾದ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ-ಪುಸ್ತಕ ಹಾಗೂ ನೋಟ್ ಬುಕ್‍ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮೊಳ್ಳಯ್ಯನಹುಂಡಿ ಬಸವರಾಜು, ಬೆಟ್ಟಹಳ್ಳಿ ಕೆಂಪರಾಜು, ಮಾದಪ್ಪ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

RELATED ARTICLES
- Advertisment -
Google search engine

Most Popular