ಬೆಂಗಳೂರು: ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹ ಲಕ್ಷ್ಮೀ ಯೋಜನೆ ಯನ್ನು ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕುಟುಂಬದ ನಿರ್ವಹಣೆಯಲ್ಲಿ ಮನೆ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಲೆಂದು ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ರೂ.೨,೦೦೦ ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ.ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ ೧೫ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.