ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ಕೇಸ್ ಆಗಿದೆ. ಹೀಗಾಗಿ ಜಾಮೀನು ನೀಡೋದಕ್ಕೆ ಸಾಧ್ಯವಿಲ್ಲ ಅಂತ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇಂದು ಮಂಗಳವಾರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಬೆಂಗಳೂರಿನ ೪೨ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆಎನ್ ಶಿವಕುಮಾರ್ ಅವರು ನಡೆಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಗಂಭೀರವಾದಂತ ವಿಚಾರವಾಗಿದೆ ಅಂತ ಅಭಿಪ್ರಾಯ ಪಟ್ಟು, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.