ರಾಮನಗರ: ಇಲ್ಲಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಯುವರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್. ರೋಟರಿ ಸಿಲ್ಕ್ ಸಿಟಿ ಮತ್ತು ಬೆಳ್ಳಿ ಬ್ಲಡ್ ಬ್ಯಾಂಕ್‌ನ ಸಹಯೋಗದೊಂದಿಗೆ ಜು. ೯ರ ಮಂಗಳವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಶ್ರೀಧರ್ ಕೆ.ಎನ್ ಹಾಗೂ ಬೆಳ್ಳಿ ಬ್ಲಡ್ ಬ್ಯಾಂಕ್ ನಿರ್ವಾಹಕ ರಾಮಲಿಂಗಯ್ಯ ಭಾಗವಹಿಸಿದ್ದರು .ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ನಾಗಶೇಷಮ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ.ಸುಮಂತ್‌ಎಚ್.ಎಂ. ಸ್ವಾಗತಿಸಿದರು. ಕಾನೂನು ಸಹಾಯಕ ಪ್ರಾಧ್ಯಾಪಕಡಾ.ಮಂಜು ನಾಯ್ಕ್ ವಂದಿಸಿದರು.
ಯುವರೆಡ್ ಕ್ರಾಸ್ ಘಟಕದ ಸಂಚಾಲಕ ಡಾ.ಅನಿತಾ, ರೋಟರಿ ಸಿಲ್ಕ್ ಸಿಟಿ ಮಾಜಿ ಅಧ್ಯಕ್ಷ ಶಿವರಾಜ್, ಕಾಲೇಜಿನ ಬೋಧಕ ಹಾಗೂ ಬೋಧಕೇತರ ನೌಕರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.