ಮಂಡ್ಯ: ಮಂಡ್ಯದ ಪಾಂಡವಪುರ ರೈಲ್ವೆ ನಿಲ್ದಾಣದ ಫ್ಲಾಟ್ ಫಾರ್ಮ್ ಒಂದರಲ್ಲಿ ಟ್ರಾಕ್ ಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿದ್ದಾರೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪರಿಚಿತ ವ್ಯಕ್ತಿಯ ವಾರಸುದಾರರು ಪತ್ತೆಯಾಗದ ಕಾರಣ ವ್ಯಕ್ತಿಯ ಶವವನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮಂಡ್ಯ ರೈಲ್ವೆ ಪೊಲೀಸ್ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.