ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಜೀವನಾಂಶದ ಹಕ್ಕು ಅನ್ವಯಿಸುತ್ತದೆ ಎಂದು ಇಂದು ಬುಧವಾರ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪತ್ನಿಯ ಜೀವನಾಂಶದ ಕಾನೂನುಬದ್ಧ ಹಕ್ಕನ್ನು ವ್ಯವಹರಿಸುವ ಸೆಕ್ಷನ್ ೧೨೫ ಅಡಿPಅ ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶಕ್ಕಾಗಿ ಈ ನಿಬಂಧನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ವಿಚ್ಛೇದನ ಪಡೆದ ಪತ್ನಿಗೆ ಸಿಆರ್ ಪಿಸಿ ಸೆಕ್ಷನ್ ೧೨೫ರ ಅಡಿಯಲ್ಲಿ ಮಧ್ಯಂತರ ಜೀವನಾಂಶ ನೀಡಬೇಕು ಎಂಬ ಆದೇಶದ ವಿರುದ್ಧ ಮುಸ್ಲಿಂ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠ ವಜಾಗೊಳಿಸಿದೆ. ಮುಸ್ಲಿಂ ಮಹಿಳೆಯರ (ವಿಚ್ಛೇದನದಲ್ಲಿ ಹಕ್ಕುಗಳ ರಕ್ಷಣೆ) ಕಾಯ್ದೆ-೧೯೮೬, ಜಾತ್ಯತೀತ ಕಾನೂನಿನ ಎದುರು ಸಮರ್ಥನೀಯವಲ್ಲ ಎಂದು ಸ್ಪಷ್ಟಪಡಿಸಿದೆ. ಉಭಯ ನ್ಯಾಯಮೂರ್ತಿಗಳು ಪ್ರತ್ಯೇಕ ಆದರೆ, ಸಹಮತದ ತೀರ್ಪು ನೀಡಿದರು.