Monday, April 21, 2025
Google search engine

Homeರಾಜ್ಯವಾಲ್ಮೀಕಿ ನಿಗಮ ಹಗರಣಕ್ಕೆ ರಾಜಕೀಯ ಲೇಪನ ಬೇಡ: ಸಚಿವ ಈಶ್ವರ್ ಖಂಡ್ರೆ ತಿರುಗೇಟು

ವಾಲ್ಮೀಕಿ ನಿಗಮ ಹಗರಣಕ್ಕೆ ರಾಜಕೀಯ ಲೇಪನ ಬೇಡ: ಸಚಿವ ಈಶ್ವರ್ ಖಂಡ್ರೆ ತಿರುಗೇಟು

ಬೀದರ್: ಪ್ರಕರಣದ ತನಿಖೆಯಲ್ಲಿ ಸರ್ಕಾರದ ಯಾವುದೇ ಒತ್ತಡ ಹಾಗೂ ಹಸ್ತಕ್ಷೇಪ ಮಾಡಿಲ್ಲ. ತನಿಖೆಯ ಬಳಿಕ ಸತ್ಯ ಹೊರಗೆ ಬರಲಿದೆ. ಪಾರದರ್ಶಕವಾಗಿ ತನಿಖೆಯಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮವಾಗಲಿದೆ. ಈ ಪ್ರಕರಣಕ್ಕೆ ರಾಜಕೀಯ ಲೇಪನ ಮಾಡುವುದು ಬೇಡ ಎಂದು ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಬೀದರ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ, ಸಿಬಿಐ ಹಾಗೂ ಚುನಾವಣಾ ಆಯೋಗ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳತ್ತಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಹೇಳುತ್ತಿದೆ. ನಮ್ಮ ಪೊಲೀಸರು ಸಮರ್ಥರಿಲ್ವಾ ನಮ್ಮ ಪೊಲೀಸರು ಈ ಪ್ರಕರಣವನ್ನು ತನಿಖೆ ಮಾಡುತ್ತಾರೆ. ನಮ್ಮ ಪೊಲೀಸರ ಬಗ್ಗೆ ನಮಗೆ ನಂಬಿಕೆ ಇದೆ. ಬಿಜೆಪಿ ಸರ್ಕಾರ ಇದ್ದಾಗ ನಾವು ಅನೇಕ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದಿದ್ದೆವು ಆಗ ಅವರು ಕೊಟ್ರಾ ಎಂದು ಅವರು ಪ್ರಶ್ನಿಸಿದ್ದಾರೆ.

ಮುಡಾ ಅಕ್ರಮ ಪ್ರಕರಣದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ, ಇದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡುತ್ತಿದೆ. ಇದನ್ನೂ ನಾವು ಸಹಿಸುವುದಿಲ್ಲ. ಸುಳ್ಳನ್ನು ನೂರು ಸರಿ ಹೇಳಿದರೂ ಅದು ಸತ್ಯವಾಗಲು ಸಾದ್ಯವಿಲ್ಲ. ಚುನಾವಣೆಯ ಸೋಲಿನಿಂದಾಗಿ ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular