ಮಂಡ್ಯ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ನಾಳೆ ಮಂಡ್ಯದಲ್ಲೂ ಸಂಜಯ್ ವೃತ್ತದಲ್ಲಿ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಮೈಸೂರಿನಲ್ಲಿ ಹೋರಾಟಕ್ಕೆ ಬೆಂಗಳೂರಿನಿಂದ ಮೈಸೂರು ತೆರಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಸ್ವಾಗತಿಸಿ, ಪ್ರತಿಭಟನೆ ನಡೆಸಲಾಗುವುದು.
ಬಳಿಕ ಮಂಡ್ಯದಿಂದ ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಮೈಸೂರಿಗೆ ಬಿಜೆಪಿ ಮುಖಂಡರು ತೆರಳಲಿದ್ದಾರೆ.
ಸುಮಾರು 700 ಕಾರುಗಳಲ್ಲಿ ಮೈಸೂರಿಗೆ ತೆರಳಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ದೊಡ್ಡ ಹಗರಣ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಅತಿಯಾದ ಸ್ವಾರ್ಥ ಇದೆ. ಮೈಸೂರು ಮುಡಾದಲ್ಲಿ ಬಾರಿ ಹಗರಣ ನಡೆದಿದೆ. ನಾಳೆ ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮ ಮಂಡಳಿ ಹಗರಣದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡ ಅಶೋಕ್ ಜಯರಾಂ ತಿಳಿಸಿದರು.
ಈ ಹಗರಣದಲ್ಲಿ ನೇರ ಹೊಣೆ ಸಿಎಂ ಸಿದ್ದರಾಮಯ್ಯ ಅವರೇ. ನಾಗೇಂದ್ರ ಅವರು ಸಹ ಇದರ ಸೇರಿದ್ದಾರೆ. ಹಗರಣದ ಹಣ ತೆಲಂಗಾಣ ಚುನಾವಣೆಗೆ ಬಳಕೆ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಹಗರಣವನ್ನು ಸಿಬಿಐಗೆ ಕೊಟ್ಟಿಲ್ಲ. ಕಾಂಗ್ರೆಸ್ ನ ಭ್ರಷ್ಟಾಚಾರವನ್ನು ಬಿಜೆಪಿ ಖಂಡಿಸುತ್ತದೆ. ಸಿದ್ದರಾಮಯ್ಯ ಅವರು ಕೂಡಲೇ ರಾಜಿನಾಮೆ ಕೊಡಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಮುಖಂಡ ಅಶೋಕ್ ಜಯರಾಂ ಹಾಗು ಸಿದ್ದರಾಮಯ್ಯ ಒತ್ತಾಯಿಸಿದರು.