ಮೈಸೂರು: ಇಂದು ಮುಖ್ಯಮಂತ್ರಿಗಳು ಸರ್ಕಾರಿ ಅತಿಥಿ ಗೃಹದಲ್ಲಿ ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಮಾಹಿತಿ ವುಳ್ಳ ಪೋಸ್ಟರ್ ನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಕಾರ್ಯಕೆ ರೈತರು ಆಂಡ್ರಾಯ್ಡ್ ಫೋನ್ ಪ್ಲೇ ಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆಪ್ ಡೌನ್ಲೋಡ್ ಮಾಡಿಕೊಂಡು ರೈತರು ಸ್ವತಂ ತಮ್ಮ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ನಮೂದಿಸಲು ಅವಕಾಶವಿರುತ್ತದೆ. ರೈತರು ಈ ಆಪ್ ನ್ನು ಡೌನ್ಲೋಡ್ ಮಾಡಿಕೊಂಡು ಸದುಪಯೋಗಪಡಿಸಿಕೊಳ್ಳಬೇಕಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ ವಿಧಾನಸಭಾ ಸದಸ್ಯರು ಆದ ಡಾ. ಯತೀಂದ್ರ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.