ಮಂಡ್ಯ: ಮೈಸೂರು ಮುಡಾ ಹಗರಣ ಖಂಡಿಸಿ ಪ್ರತಿಭಟನೆ ಹಿನ್ನಲೆ ಮಂಡ್ಯದಲ್ಲಿ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಮಂಡ್ಯದ ಸಂಜಯ್ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಹೋರಾಟಕ್ಕೆ ಬೆಂಗಳೂರಿನಿಂದ ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ಆಗಮನ ಹಿನ್ನೆಲೆ ಮಂಡ್ಯದಲ್ಲಿ ವಿಜಯೇಂದ್ರರನ್ನ ಸ್ವಾಗತಿಸಿ ಜೊತೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಹೀಗಾಗಿ ಸಂಜಯ್ ವೃತ್ತದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.