ಶ್ರೀರಂಗಪಟ್ಟಣ: ಮೊದಲನೇ ಆಷಾಡ ಶುಕ್ರವಾರದ ಅಂಗವಾಗಿ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇಗುಲದಲ್ಲಿ ಇಂದು ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಹಲವು ಬಗೆಯ ಫಲಗಳಿಂದ ಇಂದು ದೇವರ ಗರ್ಭಗುಡಿ ಸೇರಿದಂತೆ ದೇವರಿಗೆ ವಿಶೇಷ ಅಲಂಕಾರವನ್ನ ಮಾಡಿ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು.

ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ದೇವಿಯನ್ನು ದರ್ಶನ ಪಡೆದು ಭಕ್ತರು ಪುನೀತರಾದರು. ಮೊದಲ ಆಶಾಡ ಶುಕ್ರವಾರ ಅಂಗವಾಗಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.