ಬೆಂಗಳೂರು : ವಾಲ್ಮೀಕಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲಗೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾದ ಶಾಸಕ ದದ್ದಲ್ ಅವರು ನನ್ನನ್ನು ಬಂಧಿಸಿ ಎಂದು ಎಸ್‌ಐಟಿ ಅಧಿಕಾರಿಗಳ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇಡಿ ಕಣ್ತಪ್ಪಿಸಿ ನನ್ನನ್ನು ಬಂಧಿಸಿ ಅಂತ ಎಸ್ ಐ ಟಿ ಮುಂದೆ ಕುಳಿತ ದದ್ದಲ್. ಡಿವೈಎಸ್ಪಿ ಶ್ರೀನಿವಾಸ್ ಎದುರು ಬಂಧಿಸಿ ಅಂತ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. SIT ತನಿಖಾಧಿಕಾರಿಗಳ ಮುಂದೆ ಬಸನಗೌಡ ದದ್ದಲ ನನ್ನನ್ನು ಅರೆಸ್ಟ್ ಮಾಡಿ ಅಂದು ಪಟ್ಟು ಹಿಡಿದಿದ್ದಾರೆ. ಪ್ರಕರಣಕ್ಕೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು. ಈ ವೇಳೆ ವಿಚಾರಣೆಗೆ ಹಾಜರಾಗಿದ್ದ ಅವರು ನನ್ನನ್ನು ಅರೆಸ್ಟ್ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಕಳೆದ ಒಂದು ತಿಂಗಳಿನಿಂದ ತನಿಖೆ ಮಾಡುತ್ತಿದ್ದು, ಇತ್ತ ಇಡಿ ಅಧಿಕಾರಿಗಳು ಕೂಡ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗಾಗಿ ಹೇಳಿ ಅಧಿಕಾರಿಗಳ ಕಣ್ತಪ್ಪಿಸಿ ಬಸನಗೌಡ ದದ್ದಲ ಅವರು ಇದೀಗ ಎಸ ಐ ಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದಾಗ ನನ್ನನ್ನು ಬಂಧಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.